Belagavi NewsBelgaum NewsKannada NewsKarnataka News

*ಮೊದಲ ದಿನ ಶಾಲೆಗೆ ಹೋಗಿ ಬರುತ್ತಿದ್ದಾಗ ಭೀಕರ ಅಪಘಾತ: ಬಾಲಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮೊದಲ ದಿನ ಬಾಲಕ ತನ್ನ ಅಕ್ಕನ ಜೊತೆ ಶಾಲೆಗೆ ಹೋಗಿ ಹಿಂತಿರುಗುತ್ತಿದ್ದಾಗ ಅಪಘಾತದಲ್ಲಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ರಾಯಬಾಗ ತಾಲೂಕಿನ ಹೊರವಲಯದಲ್ಲಿ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಬಾಲಕನ ಮೇಲೆ ವೇಗವಾಗಿ ಬಂದ ವಾಹನ ಹರಿದು ಹೋಗಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮುತ್ತುರಾಜ್ (5) ಮೃತ ಬಾಲಕ. ನಿನ್ನೆ ಮೊದಲ ದಿನ ತನ್ನ ಅಕ್ಕನ ಜೊತೆ ಶಾಲೆಗೆ ಹೋಗಿದ್ದ ಬಾಲಕ ಸಂಜೆ ಮನೆಗೆ ವಾಪಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಾಯಬಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button