Karnataka News

*ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

Home add -Advt

ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲಿ ಈ ಘಟನೆ ನಡೆದಿದೆ. ಕೆರೆ ಏರಿಮೇಲೆ ಬೈಕ್ ಹಾಗೂ ಚಪ್ಪಲಿಗಳು ಪತ್ತೆಯಾಗಿದ್ದು, ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರು ಹಗ್ಗಕಟ್ಟಿಕೊಂಡು ಕೆರೆಗೆ ಹಾರಿ ಸಾವನ್ನಪ್ಪಿದ್ದಾರೆ.

ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತಾ ಮೃತರು. ಮಹದೇವಸ್ವಾಮಿ ಅವರ ಮತ್ತೋರ್ವ ಮಗಳು ಅರ್ಪಿತಾ, ಯುವಕನನ್ನು ಪ್ರೀತಿಸಿ ಮನೆ ಬಿಟ್ಟು ಹೋಗಿದ್ದಳು. ಇದರಿಂದ ಮನನೊಂದ ಪೋಷಕರು ಇನ್ನೋರ್ವ ಮಗಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇತಿ ನೀಡಿದ್ದು, ಕೆರೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಮೂವರ ಮೃತದೇಹ ಪತ್ತೆಯಾಗಿದೆ.


Related Articles

Back to top button