Karnataka NewsLatestPolitics

*ಮಾಜಿ ಸಿಎಂ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜಕೀಯ ಜೀವನದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಭಿಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಲಾಗಿದೆ.

ಕೋಟೆನಾಡು ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಸಮೀಪದ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೀಪಬೆಳಗುವ ಮೂಲಕ ಚಾಲನೆ ನೀಡಿದರು. ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಮಠಾಧೀಶರು, ಲಕ್ಷಾಂತರ ಅಭಿಮಾನಿಗಳು ಸಾಕ್ಷಿಯಾದರು.

Home add -Advt

ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ನಾಯಕರು ಶಾಲು ಹೊದಿಸಿ ಸನ್ಮಾನಿಸಿದರು. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಶಾಸಕರು ಹಾಗೂ ರಾಜ್ಯದಾದ್ಯಂತದ ವಿವಿಧ ಪ್ರಮುಖ ಮಠಗಳ ಮಠಾಧೀಶರು ಮತ್ತು ಸ್ವಾಮೀಜಿಗಳು ಭಾಗವಹಿಸಿದ್ದಾರೆ.

ರಾಜ್ಯ, ದೇಶದ ಮೂಲೆ ಮೂಲೆಗಳಿಂದ ಮಾತ್ರವಲ್ಲ ವಿದೇಶಗಳಲ್ಲಿ ನೆಲೆಸಿರುವ ಯಡಿಯೂರಪ್ಪ ಅಭಿಮಾನಿಗಳು ಕೂಡ ಆಗಮಿಸಿದ್ದಾರೆ. ಈ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನದಲ್ಲಿ 50 ವರ್ಷ ಪೂರ್ಣಗೊಳಿಸಿದ್ದು, ದಣಿವರಿಯದ ಧೀಮಂತ ಜನನಾಯಕ, ರೈತ ಬಂಧು ಬಿಎಸ್ ವೈ ಅವರಿಗೆ ಅಭಿಮಾನದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related Articles

Back to top button