Kannada NewsKarnataka NewsLatest
*ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಹೃದಯಾಘಾತದಿಂದ ಟೆಕ್ಕಿ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸರಣಿ ಮುಂದುವರೆದಿದೆ. ಚಿಕ್ಕ ವಯಸ್ಸಿನವರೂ ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಹೋಗಿದ್ದ ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಹುಲ್ (29) ಮೃತ ಟೆಕ್ಕಿ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ವ್ಹೀಕೆಂಡ್ ಹಿನ್ನೆಲೆಯಲ್ಲಿ ಐವರು ಸ್ನೇಹಿತರ ಜೊತೆ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳಿದ್ದರು. ಚಿಕ್ಕಮಗಳೂರಿನ ಹೊರವಲಯದ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಇದ್ದಕ್ಕಿದ್ದಂತೆ ರಾಹುಲ್ ಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರು.
ತಕ್ಷಣ ಅವರನ್ನು ಕಾರಿನಲ್ಲಿ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕಾರಿನಲ್ಲಿಯೇ ಮಾರ್ಗಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.