CrimeKannada NewsKarnataka NewsLatest

ಹಳ್ಳದ ನೀರಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ಸಾವು

ಪ್ರಗತಿವಾಹಿನಿ ಸುದ್ದಿ: ತೋಟಕ್ಕೆ ಆಟವಾಡಲು ತೆರಳಿದ್ದ ಇಬ್ಬರು ಮಕ್ಕಳು ಹಳ್ಳದ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಮೃತರನ್ನು ಶ್ರೀನಿವಾಸ್ ಹಾಗೂ ಪದ್ಮಾವತಿ ದಂಪತಿಯ ಪುತ್ರ ಮಧು (14) ಮತ್ತು ನಾರಾಯಣ್ ಹಾಗೂ ಮಾಧುರಿ ದಂಪತಿಯ ಪುತ್ರ ಶ್ರೀಹರಿ (8) ಎಂದು ಗುರುತಿಸಲಾಗಿದೆ.

ಕನಕಪುರ ತಾಲೂಕಿನ ಗುಣಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಈ ಸಂಬಂಧ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದ ಗ್ರಾಮದ ಹೊರವಲಯದಲ್ಲಿರುವ ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನಿನ್ನೆ ತೋಟಕ್ಕೆ ಆಟವಾಡಲು ತೆರಳಿದ್ದ ಮಕ್ಕಳು ಹಳ್ಳದಲ್ಲಿ ಈಜಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಮಾಹಿತಿ ತಿಳಿದು ಕೋಡಿಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

*ರೈತ ಸಂಘದ ಕಚೇರಿಯಲ್ಲೇ ತಾಲೂಕು ಅಧ್ಯಕ್ಷ ನೇಣಿಗೆ ಶರಣು* – Pragati Vahini

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button