Politics

*ಮುನಿರತ್ನ ಬೆಂಬಲಿಗರಿಂದ ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ: ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುವುದಾಗಿ ಧಮ್ಕಿ*

ದೂರು ದಾಖಲು

Home add -Advt

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಬೆಂಬಲಿಗರಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಮುನಿರತ್ನ ಬೆಂಬಲಿಗರು ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದಾರೆ. ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆಯೊಡ್ಡಿದ್ದಾರೆ. ನಿಮ್ಮ ವಂಶವೇ ಇರದಂತೆ ಮಾಡುತ್ತೇವೆ ಎಂದು ಧಮ್ಕಿ ಹಾಕಿದ್ದಾರೆ.

ಸಾಕ್ಷಿಗಳ ಮನೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಬೆದರಿಕೆ ಹಾಕಿದ್ದಾಳೆ. ಸುನಂದಮ್ಮ ಹಾಗೂ ಬಿಜೆಪಿ ಕಾರ್ಯಕರ್ತರಿಂದ ನಮಗೆ ಬೆದರಿಕೆ ಹಕಲಾಗುತ್ತಿದೆ ಎಂದು ಸಂತ್ರಸ್ತೆಯ ಪುತ್ರ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related Articles

Back to top button