Kannada NewsKarnataka NewsLatest
*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಧಾರವಾಡ, ಗದಗ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯಿಂದಲೇ ಮಳೆಯಾಗುತ್ತಿದ್ದು, ನಾಳೆ ಕೂಡ ಮಳೆ ಮುಂದುವರೆಯಲಿದೆ. ಉತ್ತರ ಒಳನಾಡಿನ ಬಹುತೆಕ ಕಡೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.
ಇನ್ನು ತಮಿಳುನಾಡು ಹಾಗೂ ಕೇರಳದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



