Latest

ಪ್ರವಾದಿ ವಿರುದ್ಧ ಹೇಳಿಕೆ ಖಂಡಿಸಿ ಭುಗಿಲೆದ್ದ ಪ್ರತಿಭಟನೆ; ರಾಂಚಿಯಲ್ಲಿ ಹಿಂಸಾಚಾರಕ್ಕೆ ಇಬ್ಬರು ಬಲಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಬಂಧನಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಂ ಮುಖಂಡರ ಪ್ರತಿಭಟನೆಗಳು ತೀವ್ರಗೊಂಡಿದ್ದು, ಹಲವೆಡೆ ಹಿಂಸಾಚಾರಕ್ಕೆ ತಿರುಗಿದೆ.

ಜಾರ್ಖಂಡ್ ನ ರಾಂಚಿಯಲ್ಲಿ ಮುಸ್ಲಿಂ ಸಮುದಾಯದ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದು, ಪ್ರತಿಭಟನೆ ವೇಳೆ ಕಲ್ಲುತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದೆ.

Home add -Advt

ಪ್ರತಿಭಟನೆ ಹಿಂಸಾಚಹರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇನ್ನು ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು, ಉತ್ತರಪ್ರದೇಶದಲ್ಲಿ ಈವರೆಗೆ 150 ಜನರನ್ನು ಪೊಲೀಸರು ಬಂಧಿಸಿದ್ದಾರೆ. 5000 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಪಿಎಸ್ ಐ ಹುದ್ದೆ ಅಕ್ರಮ; ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿ 8 ಆರೋಪಿಗಳ ಜಾಮೀನು ತಿರಸ್ಕೃತ

Related Articles

Back to top button