Kannada NewsKarnataka News

ಕ್ಷೇತ್ರದೊಂದಿಗೆ ನಿರಂತರ ಸಂಪರ್ಕ; ನಿರಂತರ ಅಭಿವೃದ್ಧಿ -ಗಣೇಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ -ಪ್ರಕಾಶ ಹುಕ್ಕೇರಿ ಮತ್ತು ನಾನು ಚಿಕ್ಕೋಡಿ -ಸದಲಗಾ ಕ್ಷೇತ್ರದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದು, ನಿರಂತರವಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯವನ್ನು ಹಮ್ಮಿಕೊಳ್ಳುತ್ತ ಬರುತ್ತಿದ್ದೇವೆ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.

ಮಾಂಜರಿ ಗ್ರಾಮದ ಎಸ್ ಸಿ ಕಾಲೋನಿಯಲ್ಲಿ 99 ಲಕ್ಷ ರೂ. ವೆಚ್ಚದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಸರಕಾರ ಯಾವುದೇ ಇರಲಿ ನಾವು ಮಾತ್ರ ಜನರೊಂದಿಗಿರುತ್ತೇವೆ. ಅಭಿವೃದ್ಧಿ ಯೋಜನೆಗಳನ್ನು ತರುತ್ತೇವೆ. ಜನರೂ ಸಹ ನಮ್ಮೊಂದಿಗೆ ಸದಾ ಸಹಕಾರ ನೀಡುತ್ತ ಬಂದಿದ್ದಾರೆ. ಅವರ ವಿಶ್ವಾಸಕ್ಕೆ ತಕ್ಕಂತೆ ನಾವೂ ನಡೆದುಕೊಳ್ಳುತ್ತಿದ್ದೇವೆ ಎಂದು ಅವರು ಹೇಳಿದರು.

ಕ್ಷೇತ್ರದ ಜನರು ನಮ್ಮನ್ನು ತಮ್ಮ ಕುಟುಂಬವೆಂದೇ ತಿಳಿದುಕೊಂಡಿದ್ದಾರೆ. ಎಲ್ಲ ರೀತಿಯ ಸಮಸ್ಯೆಗಳನ್ನೂ ಹಂಚಿಕೊಳ್ಳುತ್ತಾರೆ. ನಾವೂ ಕೂಡ ಎಲ್ಲರ ಸಮಸ್ಯೆಗಳಿಗೆ ನಮ್ಮಿಂದಾದ ರೀತಿಯಲ್ಲಿ ಸ್ಪಂದಿಸುತ್ತ ಬಂದಿದ್ದೇವೆ ಎಂದು ಗಣೇಶ ಹುಕ್ಕೇರಿ ಹೇಳಿದರು.

ಚರಂಡಿ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದ ಗಣೇಶ ಹುಕ್ಕೇರಿ, ಸಮಯ ಮಿತಿಯಲ್ಲಿ ಕೆಲಸ ಪೂರ್ಣಗೊಳಿಸುವಂತೆ ತಿಳಿಸಿದರು.

Home add -Advt

ಗ್ರಾಮದಲ್ಲಿ ಆಗಬೇಕಿರುವ ಕೆಲಸಗಳ ಕುರಿತು ಅವರು ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು.

ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Back to top button