Karnataka News

*ಮಹಾಮಳೆ ಎಚ್ಚರಿಕೆ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಅದರಲ್ಲಿಯೂ ರಣಮಳೆಗೆ ಬೆಂಗಳೂರಿಗರ ಪಾಡಂತೂ ಹೇಳತೀರದು. ಈ ನಡುವೆ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 22ರಂದು ವಾಯುಭಾರ ಮತ್ತಷ್ಟು ಕುಸಿತವಾಗಿವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ ಹಾಗೂ ಬೆಂಗಾಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button