Kannada NewsLatest

ಹಳ್ಳ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಬಾಲಕಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸೇತುವೆಗಳು ಮುಳುಗಡೆಯಾಗಿದ್ದು, ನದಿ, ಕೆರೆ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಈ ಮಧ್ಯೆ ಹಳ್ಳ ದಾಟುತ್ತಿದ್ದಾಗ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಚಿಕ್ಕೋಡಿ ತಾಲೂಕಿನ ರಾಮನಗರ ಕಾಲೋನಿಯಲ್ಲಿ ನಡೆದಿದೆ.

ಬಸ್ ನಿಲ್ದಾಣದಿಂದ ತಾಯೊಯೊಂದಿಗೆ ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಹಳ್ಳ ದಾಟುತ್ತಿದ್ದ ವೇಳೆ ಬಾಲಕಿ ಜಾರಿಬಿದ್ದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾಳೆ.

ನೀರು ಪಾಲಾಗಿರುವ ಬಾಲಕಿಗಾಗಿ ಎಸ್ ಡಿ ಆರ್ ಎಫ್ ತಂಡದಿಂದ ಶೋಧಕಾರ್ಯ ನಡೆದಿದೆ.
ಕೃಷ್ಣಾ ನದಿ ಪಾತ್ರದಲ್ಲಿ ತೀವ್ರ ಪ್ರವಾಹ ಎಚ್ಚರಿಕೆ

Related Articles

Back to top button