Latest

ದೇಶದಲ್ಲಿ 8,49,553ಕ್ಕೆ ಏರಿಕೆಯಾದ ಕೊರೊನಾ ಪೀಡಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇಂದು ಒಂದೇ ದಿನ 28,637 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8 ಲಕ್ಷ ಗಡಿ ದಾಟಿದೆ.

ಶನಿವಾರ 28,637 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ. ಇದಲ್ಲದೆ 551 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 22,674ಕ್ಕೆ ಏರಿಕೆಯಾಗಿದೆ.

Home add -Advt

ಈವರೆಗೆ ಕೊರೋನಾದಿಂದ ಗುಣ ಆದವರು 5,34,620 ಜನ ಮಾತ್ರ. ದೇಶದಲ್ಲಿ ಇನ್ನೂ 2,92,258 ಜನರಲ್ಲಿ ಕೊರೊನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

Related Articles

Back to top button