
ಪ್ರಗತಿವಾಹಿನಿ ಸುದ್ದಿ; ಬೀದರ್: ಬಾಲಕನೊಬ್ಬನನ್ನು ಮನಬಂದಂತೆ ಚಾಕುವಿನಿಂದ ಇರಿದು, ಬಳಿಕ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಭೀಕರ ಘಟನೆ ಬೀದರ್ ಜಿಲ್ಲೆಯ ಔರಾದ್ ನ ಕೊಟಗ್ಯಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಶಿವಕುಮಾರ್ ಗೋಡೆ (17) ಕೊಲೆಯಾದ ದುರ್ದೈವಿ. ಬಾಲಕನನ್ನು ಚಾಕುವಿನಿಂದ ಇರಿದು, ಬೆಂಕಿಯಲ್ಲಿ ಸುಟ್ಟು ಹತ್ಯೆಗೈಯ್ಯಲಾಗಿದೆ. ಕೃತ್ಯದ ಹಿಂದಿನ ಕಾರಣ ತಿಳಿದುಬಂದಿಲ್ಲ.
ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.