Latest

ಹಿಜಾಬ್ ವಿವಾದ; 24 ವಿದ್ಯಾರ್ಥಿನಿಯರಿಗೆ ನಿರ್ಬಂಧ

ಪ್ರಗತಿವಾಹಿನಿ ಸುದ್ದಿ; ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಮತ್ತೆ ಹಿಜಾಬ್ ವಿವಾದ ಆರಂಭವಾಗಿದ್ದು, ಕೆಲ ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ಗಾಗಿ ಪಟ್ಟು ಹಿಡಿದಿದ್ದಾರೆ. ಹಿಜಾಬ್ ಗೆ ಪಟ್ಟು ಹಿಡಿದ 24 ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ನಿರ್ಬಂಧ ಹೇರಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿ ಕಾಲೇಜಿನಲ್ಲಿ 24 ವಿದ್ಯಾರ್ಥಿನಿಯರಿಗೆ 1 ವಾರ ಕಾಲ ತರಗತಿಗೆ ನಿರ್ಬಂಧ ವಿಧಿಸಿ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

Home add -Advt

24 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶ ಕೊಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ.
ಮತ್ತೆ ಏರಿಕೆಯಾಯ್ತು ಬಂಗಾರದ ಬೆಲೆ; ಯಾವ ನಗರದಲ್ಲಿ ಎಷ್ಟು?

Related Articles

Back to top button