Latest

ಎಲ್ಲದಕ್ಕೂ ಪ್ರಧಾನಿ ಮೋದಿ ಹೊಣೆ ಎಂಬುದು ಸರಿಯಲ್ಲ ಎಂದ ಹೆಚ್.ಡಿ ದೇವೇಗೌಡ

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಎಲ್ಲದಕ್ಕೂ ಪ್ರಧಾನಿ ಮೋದಿಯವರನ್ನು ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ. ಆರ್ಥಿಕವಾಗಿ ದೇಶ ಸಂಕಷ್ಟಕ್ಕೆ ಗುರಿಯಾಗಿದೆ. ಇದಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆದೋರಿದ ಸಮಸ್ಯೆಗಳೂ ಕಾರಣವಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದಾಗಿ ಆರ್ಥಿಕ ಸಂಕಷ್ಟ ಹೆಚ್ಚಿದೆ. ಹಲವು ಸಮಸ್ಯೆಗಳು ಎದುರಾಗಿವೆ. ಹೀಗಿರುವಾಗ ಪ್ರಧಾನಿ ಮೋದಿಯವರ ತಪ್ಪುಗಳನ್ನು ಹುಡುಕುತ್ತಾ ಕೂಡುವುದು ಸರಿಯಲ್ಲ. ಕೊರೊನಾ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿವೆ ಎಂದರು.

Home add -Advt

ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ದೇವೇಗೌಡರು, ನಮ್ಮ ಬಗ್ಗೆ ಲಘುವಾಗಿ ಮಾತನಾಡಿರುವವರಿಗೆ ಚುನಾವಣೆ ನಂತರ ಉತ್ತರ ನೀಡುತ್ತೇನೆ. ನಮ್ಮ ಪಕ್ಷ ಯಾರು ಯಾರನ್ನ ಬೆಳೆಸಿದೆ. ಯಾರು ಯಾವ ಯಾವ ಪಕ್ಷ ಸೇರಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಶಿರಾ ಹಾಗೂ ಆರ್. ಆರ್ ನಗರ ಉಪಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದರು.

Related Articles

Back to top button