Kannada NewsKarnataka NewsLatestPolitics

*ಬಾಂಬರ್ ಯಾರೆಂಬುದು ಗೊತ್ತಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಂಬ್ ಸ್ಫೋಟ ಪ್ರಕರಣದ ಶಂಕಿತನ ಪತ್ತೆಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಾಂಬರ್ ಯಾರೆಂಬುದು ಒಂದು ಹಂತಕ್ಕೆ ಬಹುತೇಕ ಪತ್ತೆಯಾಗಿದೆ. ಅದನ್ನು ಸಿಸಿಬಿ, ಎನ್ ಐಎ ಅಧಿಕಾರಿಗಳು ದೃಢಪಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

Home add -Advt

ಮಾರ್ಚ್ 1ರಂದು ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೊಟ ನಡೆದಿತ್ತು. ಘಟನೆಯಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಲಾಗಿತ್ತು, ಬಾಂಬರ್ ಪತ್ತೆಗಾಗಿ ಪೊಲೀಸರು ಹಾಗೂ ಎನ್ ಐಎ ತೀವ್ರ ಶೋಧ ನಡೆಸಿದ್ದು, ಇದೀಗ ಬಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿರುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.


Related Articles

Back to top button