Kannada NewsLatestNational

*ಸ್ಫೋಟದಿಂದ ನೆಲಸಮವಾದ ಪಟಾಕಿ ಕಾರ್ಖಾನೆ: 11 ಸಾವು*

ಪ್ರಗತಿವಾಹಿನಿ ಸುದ್ದಿ: ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ 11 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಇಒ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆ ಸಂಪೂರ್ಣವಾಗಿ ನೆಲಸಮವಾಗಿದೆ. ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಕೌಶಂಬಿ ಜಿಲ್ಲೆಯ ಜಿಲ್ಲಾಧಾಕಾರಿ ಅಮಿತ್ ಕುಮಾರ್ ಪಾಲ್ ಅವರು ಮಾಹಿತಿ ನೀಡಿದ್ದಾರೆ.

ಸದ್ಯ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಅವಶೇಷಗಳಡಿಯಿಂದ ಶವಗಳನ್ನು ಹೊರತೆಗೆಯುವ ಕೆಲಸದಲ್ಲಿ ನಿರತರಾಗಿದ್ದಾರೆ. 

ಕಳೆದ ನಾಲ್ಕು ಗಂಟೆಗಳಿಂದ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಐಜಿ ಮತ್ತು ಡಿಐಜಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಮತ್ತೊಂದೆಡೆ, ಕುಟುಂಬಸ್ಥರು ತಮ್ಮ ಪ್ರೀತಿಪಾತ್ರರ ಮಾಹಿತಿಗಾಗಿ ಆತಂಕದಿಂದ ಕಾಯುತ್ತಿದ್ದು, ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button