Kannada NewsLatest

ಶಾಲಾ ಬಸ್ ಹರಿದು ಬಾಲಕಿ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಾಲಕಿ ಮೇಲೆ ಖಾಸಗಿ ಶಾಲಾ ಬಸ್ ಹರಿದು ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಜಧಾನಿ ಬೆಂಗಳೂರಿನ ಬನಶಂಕರಿಯ ದೆವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

16 ವರ್ಷದ ಕೀರ್ತನಾ ಮೃತ ಬಾಲಕಿ. ಕೀರ್ತನಾ ತನ್ನ ಸ್ನೇಹಿತರ ಜತೆ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಳು. ಈ ವೇಳೆ ಹಿಂದಿನಿಂದ ಬಂದ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಬಾಲಕಿ ಮೇಲೆಯೇ ಹರಿದಿದೆ.

Home add -Advt

ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ: ಚೆನ್ನಮ್ಮ ವೃತ್ತದಲ್ಲಿ ಸರಣಿ ಅಪಘಾತ
ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ; EDಯಿಂದ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ

Related Articles

Back to top button