Latest

ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ; ವಿಷಾದ ವ್ಯಕ್ತಪಡಿಸಿದ ಕೆ.ಎನ್ ರಾಜಣ್ಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿಷಾದ ವ್ಯಕ್ತಪಡಿಸಿದ್ದಾರೆ.

ತಮ್ಮ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತ ಕೆ.ಎನ್ ರಾಜಣ್ಣ, ಹೇಳಿಕೆಯಿಂದ ದೇವೇಗೌಡರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಬೇಸರವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಈ ಬಗ್ಗೆ ದೇವೇಗೌಡರನ್ನು ಭೇಟಿಯಾಗಿ ವಿಚಾರವನ್ನು ಅರ್ಥೈಸುತ್ತೇನೆ ಎಂದು ಹೇಳಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬಕ್ಕೆ ತಯಾರಿ ನಡೆಸಲಾಗಿದೆ. ಅದನ್ನು ಹಿನ್ನಡೆ ಮಾಡಬೇಕು ಎಂದು ಹೀಗೆ ಮಾಡಲಾಗಿದೆ. ದೇವೇಗೌಡರ ಮನಸ್ಸಿಗೆ ಬೇಸರವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ನನ್ನ ಪದಬಳಕೆ ತಪ್ಪಾಗಿ ಅರ್ಥಮಾಡಿಕೊಳ್ಳಲಾಗಿದೆ. ರಾಜಕೀಯವಾಗಿ ಮುಗಿಸಲು ಪಿತೂರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಮಾರಂಭವೊಂದರಲ್ಲಿ ಮಾತನಾಡಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಹೆಚ್.ಡಿ.ದೇವೇಗೌಡರು ಈಗಗಲೇ ಇಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡು ಹೋಗ್ತಾರೆ. ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲಿಯೇ ಇದೆ ಎಂದು ವ್ಯಂಗ್ಯವಾಡಿದ್ದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವನ್ನೇ ಬಯಸಿದರಾ ಮಾಜಿ ಶಾಸಕ?

Home add -Advt

Related Articles

Back to top button