Kannada NewsKarnataka NewsLatest

*ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 504, 153ರ ಅಡಿಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

ನಿನ್ನೆ ಹುಣಸೂರಿನಲ್ಲಿ ನಡೆದ ಹನುಮಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು.

ನಿನ್ನೆ ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಎಫ್ ಐ ಆರ್ ದಾಖಲಿಸುವುದಾಗಿ ಭರವಸೆ ಕೊಟ್ಟ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಕಾರ್ಯಕರ್ತರು ದೂರು ನೀಡಿ, ಪ್ರತಿಭಟನೆ ಹಿಂಪಡೆದಿದ್ದರು.

Home add -Advt

Related Articles

Back to top button