Latest

ಬಂಧನದ ಬೆನ್ನಲ್ಲೇ ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ

ಪ್ರಗತಿವಾಹಿನಿ ಸುದ್ದಿ; ಲಖನೌ: ಉತ್ತರ ಪ್ರದೇಶ ಲಖೀಂಪುರ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ಬಂಧಿಸಿದ್ದು, ಬಂಧನದ ಬೆನ್ನಲ್ಲೇ ಇದೀಗ ಪ್ರಿಯಾಂಕಾ ಗಾಂಧಿ ಕಸ ಗುಡಿಸುತ್ತಿರುವ ವಿಡಿಯೋ ಭಾರಿ ವೈರಲ್ ಆಗಿದೆ.

ಲಖೀಂಪುರ ಹಿಂಸಾಚರದಲ್ಲಿ ಮೃತಪಟ್ಟ ರೈತ ಕುಟುಂಬವನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ವಶದಲ್ಲಿರುವ ಪ್ರಿಯಾಂಕಾ ಗಾಂಧಿ ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿದ್ದು, ತಮ್ಮ ಕೊಠಡಿಯನ್ನು ತಾವೇ ಪೊರಕೆ ಹಿಡಿದು ಸ್ವಚ್ಛಗೊಳಿಸಿದ್ದಾರೆ.

Home add -Advt

ತಮ್ಮ ಕೊಠಡಿ ಸ್ವಚ್ಛವಿಲ್ಲದ ಕಾರಣ ಸ್ವತ: ಪ್ರಿಯಾಂಕಾ ಪೊರಕೆ ಹಿಡಿದು ಕಸ ಗುಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋಗಳು ವೈರಲ್ ಆಗಿವೆ.

ಪ್ರಿಯಾಂಕಾ ಗಾಂಧಿ ಪೊಲೀಸರ ವಶಕ್ಕೆ

Related Articles

Back to top button