Belagavi NewsBelgaum NewsKannada NewsKarnataka NewsNationalPolitics

*ಸಿಎಂ ಕುರ್ಚಿ ಗೊಂದಲ ನಿವಾರಿಸಿ: ದೆಹಲಿಯಲ್ಲಿ ಸಚಿವರ ಪಟ್ಟು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಮುಖ ಸಚಿವರು, ನಾಯಕರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರಿಗೆ ಗೊಂದಲ ಇತ್ಯರ್ಥಪಡಿಸಲು ಒತ್ತಡ ಹಾಕಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಸಚಿವರಾದ ಸತೀಶ್ ಜಾರಕಿ‌ಹೊಳಿ, ಹೆಚ್.ಸಿ. ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

Home add -Advt

ಕಳೆದ ಏಳೆಂಟು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆಯಲ್ಲಿದೆ. ಇದರಿಂದ ಪಕ್ಷಕ್ಕೆ ಮುಜುಗರವಾಗುತ್ತಿದೆ. ಕೋಟ್ಯಂತರ ರೂಪಾಯಿ ವ್ಯಯಿಸಿ ಗ್ಯಾರಂಟಿ ಯೋಜನೆ ಜಾರಿಗೆ ತಂದರೂ ಗೊಂದಲಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಈ ಹಿನ್ನೆಲೆ ಹೈಕಮಾಂಡ್ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಒಂದು ನಿಲುವಿಗೆ ಬರುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.

ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು. ಮುಖ್ಯಮಂತ್ರಿ ಬದಲಾವಣೆ ಮಾಡಬೇಕಾ, ಬೇಡ್ವ ಎನ್ನುವುದು ಹೈಕಮಾಂಡ್‌ಗೆ ಬಿಟ್ಟಿದೆ. ಸಿದ್ದರಾಮಯ್ಯ ಅವರು ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು 2.5 ವರ್ಷದ ಮಾತು ಕೊಟ್ಟಿದ್ದರೆ ಅದು ಹೈಕಮಾಂಡ್‌ಗೆ ಗೊತ್ತಿದೆ. ಹಿರಿಯ ಶಾಸಕರಿಗೂ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು. ಕಾಂಗ್ರೆಸ್ ಪಕ್ಷ, ಹೈಕಮಾಂಡ್ ಅನ್ನು ಹತ್ತಿರದಿಂದ ನೋಡಿದ್ದೇನೆ. ವಿಷಯವನ್ನು ಆದಷ್ಟು ಬೇಗ ಪರಿಹರಿಸಬೇಕು ಎಂದು ಕೇಳಿದೆ. 

ಒಳಮೀಸಲಾತಿ ಭರವಸೆಯನ್ನು ಚುನಾವಣೆ ಸಮಯದಲ್ಲಿ ನೀಡಿದ್ದೆವು. ಹೈಕಮಾಂಡ್ ಬೆಂಬಲದೊಂದಿಗೆ ನಾವು ಜಾರಿ ಮಾಡಿದ್ದೇವೆ. ಇದಕ್ಕೆ ಸಹಕಾರ ನೀಡಿದ ಹೈಕಮಾಂಡ್ ನಾಯಕರಿಗೂ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.

ಈ ಬಗ್ಗೆ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ, ರಾಜ್ಯದಲ್ಲಿ ಮುಖ್ಯಮಂತ್ರಿ ಗೊಂದಲ ತಕ್ಷಣ ಬಗೆಹರಿಸಬೇಕು ಎಂದು ವರಿಷ್ಠರಿಗೆ ಮನವಿ ಮಾಡಿದ್ದೇನೆ ಎಂದರು. ಸರ್ಕಾರದ ಮೂಲಕ ಒಳ್ಳೆಯ ಕೆಲಸ ಮಾಡುತ್ತಿದ್ದೇವೆ. ಐವತ್ತು ಸಾವಿರ ಕೋಟಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಐದು ಕೋಟಿಯಷ್ಟು ಜನರಿಗೆ ಸರ್ಕಾರದ ಸೌಲಭ್ಯಗಳು ತಲುಪುತ್ತಿವೆ. ಈ ಹಂತದಲ್ಲಿ ಇಂತಹ ವಿಚಾರದಲ್ಲಿ ಗೊಂದಲ ಸರಿಯಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ತಡ ಮಾಡಬಾರದು. ಏನಾದರೂ ಒಂದು ನಿರ್ಧಾರ ಸ್ಪಷ್ಟವಾಗಿ ತೆಗೆದುಕೊಳ್ಳಬೇಕು ಎಂದರು.

Related Articles

Back to top button