Latest

ರಾಮಮಂದಿರಕ್ಕೆ ಅಡಿಗಲ್ಲು: ಸುಪ್ರಿಂ ಆದೇಶ ಉಲ್ಲಂಘನೆಯಲ್ಲ ಎಂದ ಪರಮ ಧರ್ಮ ಸಂಸದ್

   ಪ್ರಗತಿವಾಹಿನಿ ಸುದ್ದಿ, ನವದೆಹಲಿ

ರಾಮಮಂದಿರ ನಿರ್ಮಾಣ ವಿವಾದ ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ ಮಂದಿರ ನಿರ್ಮಾಣಕ್ಕೆ ಫೆ. 21ರಂದು ಅಡಿಗಲ್ಲು ಹಾಕುವುದಾಗಿ ಪರಮ ಧರ್ಮ ಸಂಸದ್ ತಿಳಿಸಿದೆ.

Home add -Advt

ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಅವರು ಪ್ರಯಾಗ್‌ ರಾಜ್‌ನಲ್ಲಿ ಸಾಧುಗಳ ಬೃಹತ್ ಸಮ್ಮೇಳನದಲ್ಲಿ ಮಾತನಾಡಿ, ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿಲ್ಲ, ಅದು ಚಾಲ್ತಿಯಲ್ಲಿದೆ. ಹಾಗಾಗಿ ನಾವು ಸುಪ್ರೀಂಕೋರ್ಟ್‌ನ ಯಾವುದೇ ಆದೇಶವನ್ನು ಉಲ್ಲಂಘನೆ ಮಾಡಿದಂತಾಗುವುದಿಲ್ಲ ಎಂದ ಅವರು, ದೇಶದೆಲ್ಲೆಡೆ ಇರುವ ಹಿಂದೂಗಳು ಈ ಚಳವಳಿಗೆ ಕೈಜೋಡಿಸಲಿದ್ದಾರೆ ಎಂದರು. 

  ಅಯೋಧ್ಯೆಯಲ್ಲಿ ಫೆ.21ರಂದು ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕುವುದಾಗಿಯೂ, ಅದೇ ದಿನ ಬೃಹತ್ ಮೆರವಣಿಗೆ ನಡೆಸುವುದಾಗಿಯೂ ತಿಳಿಸಿದರು.

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸೋಮವಾರ ಮನವಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಬುಧವಾರ ಮುಕ್ತಾಯಗೊಂಡ ಮೂರು ದಿನಗಳ ಧರ್ಮ ಸಂಸದ್‌ನಲ್ಲಿ ಅಡಿಗಲ್ಲು ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

Related Articles

Back to top button