Kannada NewsLatest

ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸದಾಶಿವರಾವ ಬಾಪುಸಾಹೇಬ ಭೋಸಲೆ ನಿಧನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಅಪ್ಪಟ ಗಾಂಧಿವಾದಿಯಾಗಿದ್ದ ಸದಾಶಿವರಾವ ಬಾಪುಸಾಹೇಬ ಭೋಸಲೆ(101) ಅವರು ವಯೋಸಹಜ ಅನಾರೋಗ್ಯದಿಂದ ತಾಲ್ಲೂಕಿನ ಕಡೋಲಿ ಗ್ರಾಮದ ಸ್ವಗೃಹದಲ್ಲಿ ಗುರುವಾರ ಮುಂಜಾನೆ ನಿಧನರಾದರು.

ಮೃತರಿಗೆ ಪುತ್ರ, ಸೊಸೆ, ಮಗಳು, ಅಳಿಯ ಹಾಗೂ ಮೊಮ್ಮಕ್ಕಳು ಇದ್ದಾರೆ.

ಸದಾಶಿವರಾವ ಬಾಪುಸಾಹೇಬ ಭೋಸಲೆ ಅವರು ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆಗಳನ್ನು ಪಾಲಿಸುತ್ತಿದ್ದರು. ಅವರಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದರು.

1946ರಲ್ಲಿ ಬ್ರಿಟಿಷ್ ಸರ್ಕಾರವು ನಡೆಸಿದ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು ಹಾಗೂ 1952ರಲ್ಲಿ ಹಿರೇಬಾಗೇವಾಡಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು.

Home add -Advt

ಬೆಳಗಾವಿ ಉಪ ವಿಭಾಗಾಧಿಕಾರಿ ಅಶೋಕ ತೇಲಿ ಅವರು ಕಡೋಲಿಗೆ ತೆರಳಿ ಸದಾಶಿವರಾವ ಬಾಪುಸಾಹೇಬ ಭೋಸಲೆ ಅವರಿಗೆ ಜಿಲ್ಲಾಡಳಿತದ ಪರವಾಗಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Related Articles

Back to top button