Kannada NewsKarnataka NewsLatest
*ಯುವತಿ ಮೇಲೆ ಯುವಕನಿಂದ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಬೀದರ್ ಮೂಲದ ಶಿವಕುಮಾರ್ ಎಂಬಾತ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದು, ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ಶಿವಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿಯ ಕುಟುಂಬದವರು ಮನೆಯಲ್ಲಿ ಇಲ್ಲದ ವೇಳೆ ಏಕಾಏಕಿ ಮನೆಗೆ ನುಗ್ಗಿದ್ದ ಶಿವಕುಮಾರ್, ಯುವತಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.




