Karnataka NewsLatestPolitics
*ಡಿ.ಕೆ.ಸುರೇಶ್ ಗೆ EDಯಿಂದ ಸಮನ್ಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಡಿ.ಕೆ.ಸುರೇಶ್ ಅವರುಗೆ ಜಾರಿ ನಿರ್ದೇಶನಾಲಯ-ಇಡಿ ಸಮನ್ಸ್ ಜಾರಿ ಮಾಡಿದೆ.
ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಚಿನ್ನ ವಂಚನೆ ಮಾಡಿದ್ದ ಐಶ್ವರ್ಯಾ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿ.ಕೆ.ಸುರೇಶ್ ಅವರಿಗೆ ಸಂಕಷ್ಟ ಎದುರಾಗಿದ್ದು, ಇಡಿ ಸಮನ್ಸ್ ಜಾರಿ ಮಾಡಿದೆ.
ಜೂನ್ 19ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಸುರೇಶ್ ಅವರಿಗೆ ಇಡಿ ಸಮನ್ಸ್ ನಲ್ಲಿ ಸೂಚಿಸಲಾಗಿದೆ.




