Kannada NewsKarnataka NewsLatest

*EDಯಿಂದ ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ; ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ್ದಾರೆ.

ಶೀತಲ್ ಕುಮಾರ್, ಜಿನೇಂದ್ರ ಮಗ್ದುಮ್ ಎಂಬ ಉದ್ಯಮಿಗಳು ರಿಯಲ್ ಎಸ್ಟೇಟ್ ಉದ್ಯಮದ ಹೆಸರಲ್ಲಿ ಸ್ಟಾರ್ ಏರ್ ಲೈನ್ಸ್ ಮಾಲೀಕ ಸಂಜಯ್ ಘೋಡಾವತ್ ಎಂಬುವವರಿಗೆ ಬಹುಕೋಟಿ ವಂಚನೆ ಮಾಡಿದ್ದರು.

Home add -Advt

ಬರೋಬ್ಬರಿ 525 ಕೋಟಿ ರೂಪಾಯಿ ಹಣವನ್ನು ಶೀತಲ್ ಕುಮಾರ್ ಹಾಗೂ ಜಿನೇಂದ್ರ ತಮ್ಮ ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದರು. ಈ ನಿಟ್ಟಿನಲ್ಲಿ ಸಂಜಯ್ ಘೋಡಾವತ್ ಹುಬ್ಬಳ್ಳಿಯ ಅಶೋಕ ನಗರ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದರು.

ಈ ಪ್ರಕರಣವನ್ನು ನ್ಯಾಯಾಲಯ ಜಾರಿ ನಿರ್ದೇಶನಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಿತ್ತು. ಇದೀಗ ಅಕ್ರಮ ಹಣ ವರ್ಗಾವಣೆ ಪ್ರಕರಣ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಶೀತಲ್ ಕುಮಾರ್, ಜಿನೇಂದ್ರ ಮುಗ್ದುಮ್ ಅವರ ಆಸ್ತಿ ಜಪ್ತಿ ಮಾಡಿದ್ದಾರೆ.

ಇಬ್ಬರು ಉದ್ಯಮಿಗಳ ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿರುವ ಮನೆ, ಅಪಾರ್ಟ್ ಮೆಂಟ್, ವಿಂಡ್ ಮಿಲ್ ಸೇರಿದಂತೆ ಒಟ್ಟು 12 ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.


Related Articles

Back to top button