Kannada NewsKarnataka NewsLatest

ಕೊರೋನಾ: ವೈದ್ಯಾಧಿಕಾರಿಗಳ ಜೊತೆ ಗಣೇಶ ಹುಕ್ಕೇರಿ ಚರ್ಚೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಕೊರೋನಾ ಹಿನ್ನೆಲೆಯಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮದಲ್ಲಿ ತೊಡಗಿರುವ ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ, ಸದಲಗಾ ಪಟ್ಟಣದಲ್ಲಿ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿದರು.

ಪಟ್ಟಣದಲ್ಲಿ ಕೊರೋನಾ ಹರಡದಂತೆ ತೆಗೆದುಕೊಂಡಿರುವ ಕ್ರಮಗಳು, ಜನ ಜಾಗ್ರತಿ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳು, ಔಷಧ ದಾಸ್ತಾನು ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು.

ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಕುರಿತಂತೆ ಸರಕಾರದ ಮಟ್ಟದಲ್ಲಿ ಮಾತನಾಡಿ ಕ್ರಮ ತೆಗೆದುಕೊಳ್ಳುತ್ತೇನೆ. ಜನರಿಗೆ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

 

Home add -Advt

Related Articles

Back to top button