Karnataka News
*ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ*

ಪ್ರಗತಿವಾಹಿನಿ ಸುದ್ದಿ: ಉದ್ಯಮಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕಾರಿನಲ್ಲಿಯೇ ಕುಳಿತುಕೊಂಡು ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ನಡೆದಿದೆ.
ಎನ್.ಆರ್.ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ. ಕಾರ್ಕಳ ಪುರಸಭೆ ಮಾಜಿ ಅಧ್ಯಕ್ಷ ಸುಭೀತ್ ಸಹೋದರ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


