Kannada NewsKarnataka NewsLatest

*ಹಾಸ್ಟೇಲ್ ಊಟ ಸೇವಿಸಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಕಾರಣವೇನು ಗೊತ್ತಾ?

ಪ್ರಗತಿವಾಹಿನಿ ಸುದ್ದಿ: ನರ್ಸಿಂಗ್ ಹಾಸ್ಟೇಲ್ ನಲ್ಲಿ ರಾತ್ರಿ ಊಟ ಸೇವಿಸಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ವೇಳೆಯೇ ಸಿಬ್ಬಂದಿಗಳು ಇಲಿ ಪಾಷಾಣ ಸ್ಪ್ರೇ ಮಾಡಿದ್ದರು. ಇಲಿ ಪಾಷಾಣ ವಾಸನೆಯಿಂದಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

Home add -Advt

ಊಟದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಶುರುವಾಗಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೇಲ್ ಸಿಬ್ಬಂದಿ ಎಡವಟ್ಟಿನಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದು, ಘಟನಾ ಸ್ಥಳಕ್ಕೆ ಜ್ಞಾನ ಭಾರತಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸ್ಟೇಲ್ ಸಿಬ್ಬಂದಿ ಮಂಜುನಾಥ್ ನನ್ನು ವಶಕ್ಕೆ ಪಡೆದಿದ್ದಾರೆ.

Related Articles

Back to top button