Film & EntertainmentKannada NewsKarnataka NewsLatest

*ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.

ಕನ್ನಡ, ತಮಿಳು, ಮಲಯಾಳಂ ಸೇರಿದಂತೆ ಹಲವು ಸಿನಿಮಗಳಿಗೆ ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್ ಇಂದು ಇದ್ದಕ್ಕಿದ್ದಂತೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

1966ರಲ್ಲಿ ಕೇರಳದ ಅಲಪ್ಪೆಯಲ್ಲಿ ಜನಿಸಿದ್ದ ಜಾಲಿ ಬಾಸ್ಟಿನ್ ಬೆಳೆದಿದ್ದು ಬೆಂಗಳೂರಿನಲ್ಲಿ. ಇಲ್ಲಿಯೇ ಶಿಕ್ಷಣ ಪಡೆದು ಬೈಕ್ ಮೆಕಾನಿಕ್ ಆಗಿ ವೃತ್ತಿ ಆರಂಭಿಸಿದ್ದ ಅವರನ್ನು ಕೆಲವರು ಸ್ಟಂಟ್ ಮೆನ್ ಆಗಿ ಚಿತ್ರರಂಗಕ್ಕೆ ಆಹ್ವಾನಿಸಿದ್ದರು. ಪ್ರೇಮಲೋಕ ಸಿನಿಮಾದಲ್ಲಿ ರವಿಚಂದ್ರನ್ ಅವರಿಗೆ ಡ್ಯೂಪ್ ಹಾಕಿದ್ದರು. ಮಾಸ್ಟರ್ ಪೀಸ್ ಸೇರಿದಂತೆ 900 ಚಿತ್ರಗಳಿಗೆ ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ನಿನಗಾಗಿ ಕಾದಿರುವೆ ಚಿತ್ರದ ಮೂಲಕ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದರು. ರಿಸ್ಕ್ ಸ್ಟಂಟ್ ಗಳಿಗೆ ಹೆಸರಾಗಿದ್ದ ಜಾಲಿ ಬಾಸ್ಟಿನ್ ಹೃದಯಾಘಾತಕ್ಕೆ ಬಲಿಯಾಗಿದ್ದು, ಚಿತ್ರರಂಗ ಕಂಬನಿ ಮಿಡಿದಿದೆ.

Home add -Advt


Related Articles

Back to top button