Latest

ಬೆಳ್ಳಂ ಬೆಳಿಗ್ಗೆ ಜೈಲಿನ ಮೇಲೆ ಸಿಸಿಬಿ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವತಿಕೆ ನಡೆಸುತ್ತಿದ್ದ ಕೈದಿಗಳ ಮೇಲೆ ಸಮರ ಸಾರಿರುವ ಸಿಸಿಬಿ ಪೊಲೀಸರು ಕೈದಿಗಳ ಬಳಿ ಇದ್ದ ಮೊಬೈಲ್, ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಜೈಲಿನಲ್ಲಿದ್ದುಕೊಂಡೇ ಕೈದಿಗಳು ಇನ್ನಷ್ಟು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಹಲವು ದಿನಗಳಿಂದ ಆರೋಪ ಕೇಳಿಬಂದಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related Articles

Back to top button