Kannada NewsKarnataka NewsLatest

*ಅಪಾರ್ಟ್ ಮೆಂಟ್ ನ ಇಂಗುಗುಂಡಿಯಲ್ಲಿ ಅಸ್ಥಿಪಂಜರ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಅಪಾರ್ಟ್ ಮೆಂಟ್ ನ ಇಂಗುಗುಂಡಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಬೇಗೂರು ಬಳಿ ನಡೆದಿದೆ.

ಎಂ.ಎನ್.ಕ್ರೆಡೆನ್ಸ್ ಫ್ಲೋರಾ ಅಪಾರ್ಟ್ ಮೆಂಟ್ ನ ಇಂಗುಗುಂಡಿ ಸ್ವಚ್ಚ ಮಾಡುವಾಗ ಅಸ್ಥಿಪಂಜರವೊಂದು ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಅಸ್ಥಿಪಂಜರ ಪತ್ತೆಯಾಗಿದ್ದು, ಬೇಗೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ಕೊಲೆಯೋ ಅಥವಾ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವುದೋ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಈ ಬಗ್ಗೆ ಪೂರ್ವ ವಿಭಾಗದ ಜಂಟಿ ಆಯುಕ್ತ ರಮೇಶ್ ಬಾನೋಟ್ ಮಾಹಿತಿ ನೀಡಿದ್ದು, ಮೇಲ್ನೋಟಕ್ಕೆ ಇದು ಪುರುಷನ ಅಸ್ಥಿಪಂಜರದಂತೆ ಕಾಣುತ್ತಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button