Kannada NewsLatest
ರಮೇಶ್ ಜಾರಕಿಹೊಳಿ ಬೆಂಬಲಿಗರ ಭುಗಿಲೆದ್ದ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಿಡಿ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದರ ಬೆನ್ನಲ್ಲೇ ಸಚಿವರ ರಾಜೀನಾಮೆ ಅಂಗೀಕರಿಸದಂತೆ ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಗೋಕಾಕ್ ನ ಬಸವ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ರಾಜೀನಾಮೆ ಅಂಗೀಕರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಬೆಳಗಾವಿ ಬಂದ್ ಮಾಡುವುದಾಗಿ ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ರಾಸಲೀಲೆ ಸಿಡಿ ಪ್ರಕರಣದ ಬಗ್ಗೆ ಸಿಐಡಿ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ. ಸಚಿವರ ರಾಜೀನಾಮೆ ವಾಪಸ್ ಪಡೆಯಬೇಕು. ಸರ್ಕಾರ ರಾಜೀನಾಮೆ ಅಂಗೀಕರಿಸಬಾರದು ಎಂದು ಒತ್ತಾಯಿಸಿದ್ದಾರೆ.
BIG NEWS: ರಮೇಶ್ ಜಾರಕಿಹೊಳಿ ರಾಜಿನಾಮೆ




