Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ನಿಂತಿದ್ದ ಟ್ರಕ್ ಗೆ ಕೋಳಿ ಸಾಗಿಸುತ್ತಿದ್ದ ವಾಹನ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿರುವ ಪರಿಣಾಮ ಶಿವಮೊಗ್ಗ ಮೂಲದ ಇಬ್ಬರು ದುರ್ಮರಣ ಹೊಂದಿದ್ದಾರೆ. 

ವಾಸಿಂಮ್ (28) ಮುಬಾರಕ್ (22) ಮೃತರು. ವಾಹನ ಚಾಲಕ ಬಸವರಾಜ್ ಈರಪ್ಪ ಹಂಚಿನಮನಿ (37) ಸ್ಥಿತಿ ಗಂಭಿರವಾಗಿದೆ. ಇಂದು ನಸುಕಿನ ಜಾವ ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನ  ಸಂಭವಿಸಿದೆ.

Home add -Advt

ಕೊಲ್ಲಾಪುರದಿಂದ ಶಿವಮೊಗ್ಗದ ಸೊರಬಕ್ಕೆ ಕೋಳಿ ತುಂಬಿದ ಗೂಡ್ಸ್ ವಾಹನ ಹೊರಟ್ಟಿತ್ತು.‌ ಅಪಘಾತದ ರಭಸಕ್ಕೆ ನೂರಾರು ಕೋಳಿಗಳು ಸಹ ಸಾವನ್ನಪ್ಪಿದೆ.

ಘಟನಾ ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್ಐ ಅವಿನಾಶ್ ಸೇರಿ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಮೃತದೇಹಗಳು, ಗಾಯಾಳುಗಳು ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.‌ ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Related Articles

Back to top button