Kannada NewsLatest

ಬೆಳಗಾವಿಗೆ ಆಗಮಿಸಿದ ಸಚಿವ ಉಮೇಶ್ ಕತ್ತಿ ಪಾರ್ಥಿವ ಶರೀರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿರುವ ಆಹಾರ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದೆ.

ಬೆಂಗಳೂರಿನ ಹೆಚ್ ಎ ಎಲ್ ನಿಂದ ವಿಶೇಷ ವಿಮಾನದ ಮೂಲಕ ಉಮೇಶ್ ಕತ್ತಿ ಅವರ ಮೃತದೇಹವನ್ನು ಬೆಳಗಾವಿಗೆ ರವಾನಿಸಲಾಗಿದ್ದು, ಇದೀಗ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ಆಗಮಿಸಿದೆ. .

ಸಚಿವರ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು

Home add -Advt

ಸಾಂಬ್ರಾ ನಿಲ್ದಾಣದಿಂದ ಸಚಿವರ ಪಾರ್ಥಿವ ಶರೀರವನ್ನು ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ಸಚಿವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಗೆ ಕರೆದೊಯ್ಯಲಾಗುತ್ತಿದೆ.

ಬೆಲ್ಲದ ಬಾಗೇವಾಡಿಯಲ್ಲಿ ಸಚಿವ ಉಮೇಶ್ ಕತ್ತಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಮೈನಸ್ 4 ಡಿಗ್ರಿ ಉಷ್ಣಾಂಶದಲ್ಲಿ ಮೃತದೇಹ: ಅಲಂಕೃತ ಸೇನಾ ವಾಹನದಲ್ಲಿ ಪಾರ್ಥಿವ ಶರೀರ ಮೆರವಣಿಗೆ; 3 ಕ್ವಿಂಟಾಲ್ ಹೂವಿನಿಂದ ಅಲಂಕಾರ

https://pragati.taskdun.com/belgaum-news/dead-body-in-minus-4-degree-temperature-corpse-procession-in-decorated-military-vehicle-garnished-with-3-quintal-flowers/

ಸಕಲ ಸರ್ಕಾರಿ ಗೌರವಗಳೊಂದಿಗೆ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ

https://pragati.taskdun.com/latest/funeral-of-umesh-katti-with-full-state-honours/

 

Related Articles

Back to top button