Belagavi NewsBelgaum NewsKannada NewsKarnataka News

ಬೆಳಗಾವಿ : ಒಂದು ರಾತ್ರಿ, 2 ಕೊಲೆ!!

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಒಂದೇ ರಾತ್ರಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆಗೈಯಲಾಗಿದೆ.

ಸವದತ್ತಿ ತಾಲೂಕಿನಲ್ಲಿ ಒಂದು, ಅಥಣಿಯಲ್ಲಿ ಇನ್ನೊಂದು ಕೊಲೆ ನಡೆದಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Home add -Advt

ಬೆಳಗಾವಿ ಜಿಲ್ಲೆಯ ಮುರಗೋಡ ಠಾಣೆ ವ್ಯಾಪ್ತಿಯ ಬೆನಕಟ್ಟಿ ಗ್ರಾಮದಲ್ಲಿ ಶನಿವಾರ ವ್ಯಕ್ತಿಯೋರ್ವನ ಕೊಲೆಯಾಗಿದೆ. ಸವದತ್ತಿ ತಾಲೂಕಿನ  ಬೆನಕಟ್ಟಿ ಗ್ರಾಮದ ಕಾಡಪ್ಪ ರುದ್ರಪ್ಪ ಶಿರಸಂಗಿ(42) ಕೊಲೆಯಾದ ವ್ಯಕ್ತಿ. ಮಬನೂರ ಗ್ರಾಮದ  ಲಕ್ಷ್ಮಣ ದೇವೇಂದ್ರಪ್ಪ ಹೂಲಿ(21) ಹಾಗೂ ಜೀವಾಪುರ ಗ್ರಾಮದ ಸತೀಶ ಯಮನಪ್ಪ ಅರಿಬೆಂಚಿ(28) ಬಂಧಿತ ಆರೋಪಿಗಳು.  ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

*ಕೊಲೆ ಮಾಡಿ ಶವ ಬಸ್ ನಿಲ್ದಾಣದಲ್ಲಿ ಎಸೆದ ಆರೋಪಿಗಳು*

ಯುವಕನನ್ನು ಕೊಲೆ ಮಾಡಿ ಬಸ್ ನಿಲ್ದಾಣದಲ್ಲಿ ಆರೋಪಿಗಳು ಶವ ಎಸೆದು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.

ಅನಂತಪುರ ಗ್ರಾಮದ ಚೆನ್ನಮ್ಮ ಸರ್ಕಲ್ ನಲ್ಲಿರುವ ಬಸ್ ನಿಲ್ದಾಣದಲ್ಲಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಅನಂತಪುರ ಗ್ರಾಮದ ಪಕ್ಕದಲ್ಲಿರುವ ಮದಭಾವಿ ಗ್ರಾಮದ ಅಪ್ಪಾಸಾಬ ಸಿದ್ದಪ್ಪ ಕಾಂಬಳೆ(37) ಮೃತ ದುರ್ದೈವಿಯಾಗಿದ್ದಾನೆ. ಅಥಣಿ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಅಪ್ಪಸಾಬ ನಿನ್ನೆ ಮಹಾರಾಷ್ಟ್ರಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದಾನೆ. ರಾತ್ರಿ ತನ್ನ ಹೆಂಡತಿಗೆ ಫೋನ್ ಕರೆ ಮಾಡಿ ಮಶೀನ್ ರಿಪೇರಿ ಇದೆ ಇವತ್ತು ಊರಿಗೆ ಬರಲು ಆಗುವುದಿಲ್ಲ ಎಂದು ತಿಳಿಸಿದ್ದಾನೆ. ಬೆಳಗಾಗುತ್ತಲೇ ಗಂಡ ಅಪ್ಪಾಸಾಬ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

Related Articles

Back to top button