
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ರಾಜ್ಯದಲ್ಲಿಯೂ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದು, ಈ ವರ್ಷ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಸೇರಿಸಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸಬೇಕು ಎಂಬ ಚರ್ಚೆ ನಡೆಯುತ್ತಿದ್ದು, ಈಗಿನ ಪುಸ್ತಕದಲ್ಲಿ ಕೇವಲ ಜ್ಞಾನವಿದೆ ಆದರ್ ಸಂಸ್ಕಾರವಿಲ್ಲ ಎನ್ನುತ್ತಿದ್ದಾರೆ. ಪಠ್ಯದಲ್ಲಿ ಮಾರಲ್ ಸೈನ್ಸ್ ತರುವಂತೆ ಹಲವರು ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಶಿಕ್ಷಣ ತಜ್ಞರ ಜತೆ ಸಮಗ್ರವಾಗಿ ಚರ್ಚಿಸಿ ಈ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಬಹುದು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದರು.
ನನಗೆ ಗುಜರಾತ್ ಮಾದರಿ ಎಂಬುದು ಗೊತ್ತಿಲ್ಲ. ಆದರೆ ವಿದ್ಯಾರ್ಥಿಗಳಿಗೆ ಜ್ಞಾನದ ಜತೆ ಸಂಸ್ಕಾರ ಕಲಿಸಬೇಕಿದೆ. ಹಾಗಾಗಿ ಈ ನಿಟ್ಟಿನಲ್ಲಿ ಸಧ್ಯಕ್ಕೆ ಚರ್ಚೆ ನಡೆಯುತ್ತಿದೆ. ಈ ವರ್ಷ ರಾಜ್ಯದಲ್ಲಿ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ಯೋಚನೆಯಿಲ್ಲ ಎಂದು ಹೇಳಿದರು.
ಬಿಜೆಪಿ ಕಾರ್ಯಕಾರಿಣಿ ಸಭೆ ದಿಢೀರ್ ಮುಂದೂಡಿಕೆ