Latest

ಮಳೆ ಅಬ್ಬರಕ್ಕೆ ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ. ಹುಬ್ಬಳ್ಳಿಯ ಕಲಘಟಗಿಯಲ್ಲಿ ನೀರಿನ ಸೆಳೆತಕ್ಕೆ ತೇಲಿಹೋಗಿದ್ದ ಬಾಲಕಿ ಸಾವನ್ನಪ್ಪಿದ್ದು, ಇದೀಗ ಮೃತದೇಹ ಪತ್ತೆಯಾಗಿದೆ.

ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೇಕೆರೆಯಲ್ಲಿ ಈ ಘಟನೆ ನಡೆದಿದ್ದು, 8 ವರ್ಷದ ಬಾಲಕಿ ಶ್ರೀದೇವಿ ಹನುಮಂತಪ್ಪ ಗಾಣಿಗೇರ ದೇಹ ಇದೀಗ ತೇಲಿ ಹೋದ ಸ್ಥಳದ ಸುಮಾರು ಒಂದೂವರೆ ಕಿ.ಮೀ ಅಂತರದಲ್ಲಿ ಪತ್ತೆಯಾಗಿದೆ.

Home add -Advt

ಎರಡು ದಿನಗಳ ಹಿಂದೆ ಬಾಲಕಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಳು. ಅಂದಿನಿಂದ ನಿರಂತರವಾಗಿ ಎನ್‍ಡಿಆರ್‍ಎಫ್ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ್ದರು. ಇದೀಗ ಬಾಲಕಿಯ ದೇಹ ಪತ್ತೆಯಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

Related Articles

Back to top button