Karnataka News

*ಮೆಟ್ರೋದಲ್ಲಿನ ಯುವತಿಯರ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ ಕಿರಾತಕ*

ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋ ರಾಜ್ಯ ರಾಜಧಾನಿ ಜನರ ಜೀವನಾಡಿ. ಪ್ರತಿದಿನ ಲಕ್ಷಾಂತರ ಜನರು ಓಡಾಡುತ್ತಾರೆ. ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮಾಡಿ ಕಿರಾತಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿ ವಿಕೃತಿ ಮೆರೆದಿದ್ದಾನೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬನಶಂಕರಿ ಪೊಲೀಸ್ ಥಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.

Home add -Advt

ಮೆಟ್ರೋ ಕ್ಲಿಕ್ ಎಂಬ ಇನ್ ಸ್ಟಾಗ್ರಾಂ ಖಾತೆಯಲ್ಲಿ ಮೆಟ್ರೋದಲ್ಲಿನ ಯುವತಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಅಪ್ ಲೋಡ್ ಮಾಡಲಾಗಿದೆ. 13ಕ್ಕೂ ಹೆಚ್ಚು ವಿಡಿಯೋಗಳನ್ನು ಅಪರಿಚಿತನೋರ್ವ ಹಂಚಿಕೊಂಡಿದ್ದು, ಮೆಟ್ರೋ ರೈಲಿನ ಒಳಗೆ, ಮೆಟ್ರೋ ನಿಲ್ದಾಣದಲ್ಲಿ ಹುಡುಗಿಯರ ವಿಡಿಯೋ ರೆಕಾರ್ಡ್ ಮಾಡಲಾಗಿದೆ. ವಿಡಿಯೋ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲಿಟ್ ಮಾಡಲಾಗಿದೆ.

Related Articles

Back to top button