Kannada NewsKarnataka NewsLatestWorld

*ಕರ್ನಾಟಕ ಮೂಲದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

ಕರ್ನಾಟಕ ಮೂಲದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಿಂದ ಫೆಬ್ರವರಿ 9ರಿಂದ ನಾಪತ್ತೆಯಾಗಿದ್ದಾರೆ.

Home add -Advt

ಸಾಕೇತ್, ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇ ಪಿಜಿ ವ್ಯಾಸಂಗ ಮಾಡುತ್ತಿದ್ದರು. ಅವರು ಫೆಬ್ರವರಿ 10ರಂದು ಕ್ಯಾಲಿಫೋರ್ನಿಯಾದ ಬರ್ಕ್ಲೇ ನಗರದ ಡ್ವೈಟ್ ವೇ ಪ್ರದೇಶದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಸಾಕೇತ್ ಶ್ರೀನಿವಾಸಯ್ಯ ನಾಪತ್ತೆಯಾಗಿರುವುದು ಅವರ ಕುಟುಂಬ ಹಾಗೂ ಭಾರತೀಯ ಸಮುದಾಯದವರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸಾಕೇತ್ ಸುಮಾರು 6 ಅಡಿ 1 ಇಂಚು ಎತ್ತರ ಹೊಂದಿದ್ದು, ಕಪ್ಪು ಕೂದಲು ಮತ್ತು ಕಂದು ಬಣ್ಣದ ಕಣ್ಣುಗಳನ್ನು ಹೊಂದಿದ್ದಾರೆ. ಸಾಕೇತ್ ಅಪಾಯದ ಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಯಾರಿಗಾದರೂ ಮಾಹಿತಿ ದೊರೆತರೆ ತಕ್ಷಣ ತಿಳಿಸಲು ಬರ್ಕ್ಲೇ ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾಕೇತ್ ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿದ್ದು, ಚೆನ್ನೈನ ಮದ್ರಾಸ್ ಐಐಟಿಯಲ್ಲಿ ಬಿ.ಟೆಕ್ ಮಾಡಿದ್ದರು. ಪ್ರಸ್ತುತ ಅವರು ಪ್ರಾಡಕ್ಟ್ ಡೆವಲಪ್‌ಮೆಂಟ್ ಕಾರ್ಯಕ್ರಮದಡಿ ಯುನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇಯಲ್ಲಿ ಮಾಸ್ಟರ್ ಆಫ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು.


Related Articles

Back to top button