Kannada NewsKarnataka NewsLatestPolitics

*ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆ.ಡಿ.ಎಸ್.ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರುದ್ಧ ಶಿಸ್ತುಕ್ರಮಕ್ಕೆ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದಲೇ ಉಚ್ಛಾಟನೆ ಮಾಡಲಾಗಿದೆ. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದ್ದು, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಾಸಕರು ಭಾಗಿಯಾಗಿದ್ದರು.

ಕೋರ್ ಕಮಿಟಿ ಸಭೆಯಲ್ಲಿ ಸಿ.ಎಂ.ಇಬ್ರಾಹಿಂ ವಿರುದ್ಧ ಶಿಸ್ತು ಕ್ರಮಕ್ಕೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಸಭೆ ಬಳಿಕ ಜೆಡಿಎಸ್ ನಾಯಕರು ಈ ನಿಟ್ಟಿನಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.


Related Articles

Back to top button