Latest

*ಚಾಕೋಲೇಟ್ ಕೊಡುವುದಾಗಿ ಕರೆದೊಯ್ದು 9 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಚಾಕೋಲೇಟ್ ಕೊಡುವುದಾಅಗಿ ಕರೆದೊಯ್ದು ಶಾಅಲಾ ಬಾಲಕಿ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತ ಈ ಕೃತ್ಯವೆಸಗಿದ್ದಾನೆ. ಓರ್ವ ಬಾಲಕಿ ಮಾತ್ರವಲ್ಲ ಇದೇ ರೀತಿ 9 ವಿದ್ಯಾರ್ಥಿನಿಯರ ಮೇಲೂ ಕಾಮುಕ ದೌರ್ಜನ್ಯವೆಸಗಿರುವುದು ಬೆಳಕಿಗೆ ಬಂದಿದೆ.

ಶಾಲಾ ಆವರಣ ಹಾಗೂ ಶೌಚಾಲಯಕ್ಕೆ ಮಕ್ಕಳನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಕೃತ್ಯದ ಬಗ್ಗೆ ಮಕ್ಕಳು ಪೋಷಕರ ಬಳಿ ವಿಚಾರ ಹೇಳಿದ್ದಾರೆ. ತಕ್ಷಣ ಪೋಷಕರು ಆನೇಕಲ್ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಆರೋಪಿ ಕೃಷ್ಣಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೋಕ್ಸೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button