Kannada NewsKarnataka NewsLatest

*ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಬುಲೆರೊ ವಾಹನ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಬಳ್ಳಾರಿ ಮೂಲದವರು. ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16), ಪೂಜಾ (4) ಹಾಗೂ ಒಂದೂವರೆ ವರ್ಷದ ಪರುಶುರಾಮ ಮೃತ ದುರ್ದೈವಿಗಳು.

ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button