Latest

*ಮುಂದಿನ 4 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ; 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಪ್ರಮುಖವಾಗಿ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಮುನ್ನೆನ್ನೆಚ್ಚರಿಕಾ ಕ್ರಮವಾಗಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ,ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರನ ಮಳೆಯಾಗಲಿದೆ.

ಮೇ 27ರವರೆಗೂ ದಕ್ಷಿಣ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://pragati.taskdun.com/1-70-croremoneyseizedhubli/


Related Articles

Back to top button