Kannada NewsKarnataka NewsLatest

ಬೆಳಗಾವಿ ಸೇರಿದಂತೆ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಪ್ರಗತಿವಾಹಿನಿ ಸುದ್ದಿ, ವಿಜಯಪುರ – ಮುಂದಿನ 48 ಗಂಟೆಗಳಲ್ಲಿ ಉತ್ತರ ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ತಿಳಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತದಿಂದಾಗಿ ಬೆಳಗಾವಿ ಸೇರಿದಂತೆ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Home add -Advt

ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಬೀದರ್, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಂಗಳವಾರ ಸಂಜೆಯಿಂದಲೇ ಬೆಳಗಾವಿಯ ಕೆಲವು ಪ್ರದೇಶಗಳಲ್ಲಿ ದಟ್ಟಣೆಯ ಮೋಡ ಕವಿದಿದ್ದು, ಅಬ್ಬರದ ಮಳೆಯೂ ಆರಂಭವಾಗಿದೆ.

ಈ ಕುರಿತು ಮಾಹಿತಿ ಪಡೆಯಲು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಗತಿವಾಹಿನಿ ಸಂಪರ್ಕಕ್ಕೆ ಸಿಗಲಿಲ್ಲ.

ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ

Related Articles

Back to top button