Kannada NewsKarnataka NewsLatest

*ಬಾಗಲಕೋಟೆಯಲ್ಲಿ ಮತ್ತೆ ಕಲ್ಲು ತೂರಾಟ: ಪೊಲೀಸರಿಂದ ಲಾಠಿ ಚಾರ್ಜ್*

ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆಯಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.

ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ನಿನ್ನೆ ರಾತ್ರಿ ಬಾಗಲಕೋಟೆಯಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಪ್ರಕರಣ ಸಂಬಂಧ 8 ಆರೋಪಿಗಳನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದೆ.

Home add -Advt

ಕಿಲ್ಲಾ ಓಣಿಯಲ್ಲಿ ಮಾಂಸದ ಅಂಗಡಿಗಳ ಮೇಲೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ನಡೆಯುತ್ತಿದ್ದಂತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಕಿಡಿಗೇರ‍್ಡಿಗಳನ್ನು ಚದುರಿಲು ಲಾಠಿ ಚಾರ್ಜ್ ಮಾಡಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.


Related Articles

Back to top button