Kannada NewsKarnataka NewsLatest

*ಶೀತಗಾಳಿ ಹಿನ್ನೆಲೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಮೈಕೊರೆವ ಚಳಿಗೆ ಜನರು ಹೈರಾಣಾಗಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು ಹಾಗೂ ಚಳಿಯಿಂದಾಗಿ ಜನರು ನಡುಗುತ್ತಿದ್ದಾರೆ. ಮತ್ತೊಂದೆಡೆ ಶೀತಗಾಳಿ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಶೀತಗಾಳಿ ಬೀಸಲಿದ್ದು, ಐದು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ರಾಯಚೂರು, ವಿಜಯಪುರ, ಬೀದರ್, ಯಾದಗಿರಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ಧಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Related Articles

Back to top button