Karnataka News

*ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಅಧಿಕಾರಿ ಸಸ್ಪೆಂಡ್ ಗೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆ ಬೆನ್ನಲ್ಲೇ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Home add -Advt

ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣದಲ್ಲಿ ಕಾರಣಕರ್ತ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಬಲವಂತದಿಂದ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿಗಳು, ಅಧಿಕಾರಿಗಳು ಕಳುಹಿಸಿದ್ದಾರೆ. ಈ ಘಟನೆ ಬಗ್ಗೆ ಬ್ರಾಹ್ಮಣ ಮಹಾಸಭಾ ಹಾಗೂ ವಿಪ್ರ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

ಇಇದೀಗ ಸಂಬಂಧಿಸಿದ ಅಧಿಕಾರಿ ಅಮಾನತಿಗೆ ಆದೇಶಿಸಲಾಗಿದೆ.

ಶಿವಮೊಗ್ಗದಲ್ಲಿ ಮಾತ್ರವಲ್ಲ ಅತ್ತ ಬೀದರ್ ನಲ್ಲಿ ಜನಿವಾರ ತೆಗೆಯದ ಕಾರಣಕ್ಕೆ ವಿದ್ಯಾರ್ಥಿಗೆ ಸಿಇಟಿ ಕೇಂದ್ರಕ್ಕೆ ಸಿಬ್ಬಂದಿ ಬಿಟ್ಟಿಲ್ಲ. ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರದಿಂದ ಹೊರ ಕಳುಹಿಸಿದ ಘಟನೆ ನಡೆದಿದೆ.

Related Articles

Back to top button