Karnataka News

*ಈ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಇನ್ನಷ್ಟು ಹೆಚ್ಚಲಿದೆ ಮಳೆ ಅಬ್ಬರ

Home add -Advt


ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಅಬ್ಬರ ಹೆಚ್ಚಾಗಲಿದ್ದು, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕೊಡಗು, ಹಾಸನ, ವಿಜಯನಗರ, ತುಮಕೂರು, ಚಾಮರಾಜನಗರ, ಯಾದಗಿರಿ, ವಿಜಯಪುರ, ಕಲಬುರ್ಗಿ, ಹಾವೇರಿ, ಧಾರವಾಡ, ಬೆಳಗಾವಿ ಹಾಗೂ ಬಿದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

Related Articles

Back to top button